ಧರ್ಮಸ್ಥಳ: ವಿಪತ್ತು ಹಾಗೂ ಸಂಕಷ್ಟದ ಸಂದರ್ಭಗಳಲ್ಲಿ ಸಮಾಜದ ನೆರವಿಗೆ ಧಾವಿಸಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರ ಸೇವಾ ಬದ್ಧತೆ ಮತ್ತು ಮಾನವೀಯ ಕಾಳಜಿ ಶ್ಲಾಘನೀಯ ಎಂದು ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ನ.2ರಂದು ನಡೆದ ‘ಶೌರ್ಯ’ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗಿನ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಅವರು ಸ್ವಯಂಸೇವಕರ ಸೇವಾ ಅನುಭವಗಳನ್ನು ಆಲಿಸಿ, ಅವರ ಕಾರ್ಯಗಳನ್ನು ಪ್ರಶಂಸಿಸಿ ಆಶೀರ್ವಾದಪೂರ್ವಕ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಶೌರ್ಯ ಸ್ವಯಂಸೇವಕರು ವಿವಿಧ ಸಂದರ್ಭಗಳಲ್ಲಿ ಕೈಗೊಂಡ ವಿಪತ್ತು ನಿರ್ವಹಣಾ ಕಾರ್ಯಗಳು, ರಕ್ಷಣಾ ಚಟುವಟಿಕೆಗಳು ಹಾಗೂ ಸಮಾಜಮುಖಿ ಸೇವೆಗಳ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು. ವಿಪತ್ತು ಸಂಭವಿಸಿದಾಗ ಎದುರಿಸಿದ ಸವಾಲುಗಳು, ರಕ್ಷಣಾ ಕಾರ್ಯಾಚರಣೆಗಳಲ್ಲಿ ಅನುಭವಿಸಿದ ಘಟನೆಗಳು ಹಾಗೂ ಸಮಾಜಕ್ಕೆ ಸಲ್ಲಿಸಿದ ಸೇವೆಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಅವರು, ಯೋಜನೆಯಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ ಆರಂಭಿಸಿದ ಉದ್ದೇಶ, ಅದರ ಸಾಮಾಜಿಕ ಮಹತ್ವ ಹಾಗೂ ಕಳೆದ ವರ್ಷಗಳಲ್ಲಿ ಕಾರ್ಯಕ್ರಮ ಸಾಧಿಸಿರುವ ಯಶಸ್ಸಿನ ಕುರಿತು ಮಾಹಿತಿ ನೀಡಿದರು. ವಿಪತ್ತಿನ ಸಂದರ್ಭದಲ್ಲಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಕರ ಕಾರ್ಯವನ್ನು ಶ್ಲಾಘಿಸಿದರು. ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯ್ಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಆರು ವರ್ಷಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಅನುಷ್ಠಾನ, ಸೇವಾ ಸಾಧನೆಗಳು, ಕಾರ್ಯವ್ಯಾಪ್ತಿ, ವಿವಿಧ ಇಲಾಖೆಗಳ ಸಹಕಾರ ಹಾಗೂ ಸ್ವಯಂಸೇವಕರು ಸಲ್ಲಿಸಿರುವ ಅಮೂಲ್ಯ ಸೇವೆಗಳ ಕುರಿತು ವಿವರಿಸಿದರು.
2020ರಿಂದ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಒಟ್ಟು 29 ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತಮ್ಮ ಘಟಕಗಳ ಮೂಲಕ ಕೈಗೊಂಡ ರಕ್ಷಣಾ ಕಾರ್ಯಗಳು, ವಿಪತ್ತು ನಿರ್ವಹಣಾ ಚಟುವಟಿಕೆಗಳು ಹಾಗೂ ಸಾಮಾಜಿಕ ಸೇವೆಗಳ ಸಂದರ್ಭದಲ್ಲಿ ಪಡೆದ ಅನುಭವಗಳನ್ನು ಪೂಜ್ಯರೊಂದಿಗೆ ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿ ಡಾ. ಹರೀಶ್ ಕೃಷ್ಣ ಸ್ವಾಮಿ ಗೌರವ ಉಪಸ್ಥಿತರಿದ್ದರು. ಕೇಂದ್ರ ಕಚೇರಿಯ ಪ್ರಾದೇಶಿಕ ನಿರ್ದೇಶಕ ಡಿ.ಜಯರಾಮ್, ಸೋಶಿಯಲ್ ಮೀಡಿಯಾ ವಿಭಾಗದ ನಿರ್ದೇಶಕ ಪ್ರದೀಪ್ ಶೆಟ್ಟಿ, ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ ಪಟಗಾರ್ ಹಾಗೂ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...