


ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಸಂಘದ ನಿರ್ದೇಶಕರಾದ ಉಷಾ ಅಂಚನ್ ಹಾಗೂ ಸರ್ವೋತ್ತಮ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ನಡೆಯಿತು. ನೆಲ್ಯಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆಯಾಗಿರುವ ಉಷಾ ಅಂಚನ್ ಅವರ ನೇತೃತ್ವದ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಅವರನ್ನು ಗೌರವಿಸಲಾಯಿತು. ಅದೇ ರೀತಿ ಸರ್ವೋತ್ತಮ ಗೌಡ ಅವರು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಕೆ.ಎಂ. ಸ್ವಾಗತಿಸಿದರು. ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು ಅವರು ಸನ್ಮಾನಿತರನ್ನು ಅಭಿನಂದಿಸಿ ಶುಭ ಹಾರೈಸಿದರು. ಸಂಘದ ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು ಅವರು ವಂದಿಸಿದರು.
ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಜಿನ್ನಪ್ಪ ಗೌಡ, ಜನಾರ್ದನ ಗೌಡ ಬರೆಮೇಲು, ಸುಧಾಕರ ಬಿ., ಶೇಷಮ್ಮ, ಹರೀಶ್ ಎ., ಬಾಬು ನಾಯ್ಕ, ಭಾಸ್ಕರ ರೈ ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.








































































































