


ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು.
ಬೆಳಗ್ಗೆ ವಿದ್ಯಾರ್ಥಿಗಳನ್ನು ವಾದ್ಯಘೋಷದೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು. ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಗೂ ಪುಷ್ಪಾರ್ಚನೆ ಮಾಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಶಿಕ್ಷಕರೇ ಬೆಳಗ್ಗಿನ ಪ್ರಾರ್ಥನೆಯನ್ನು ನಡೆಸಿಕೊಟ್ಟರು. ಶಾಲೆಯ ಸಂಚಾಲಕ ರೆ.ಫಾ.ಹನಿ ಜೇಕಬ್ ಹಾಗೂ ಆಡಳಿತಾಧಿಕಾರಿ ಮ್ಯಾಥ್ಯೂ ಟಿ.ಜೆ. ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯ ಕೋರಿದರು.
ಸೈಂಟ್ ಆಂಟನೀಸ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಶ್ರೀಧರ ಗೌಡ ಅವರು ಮಕ್ಕಳ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಿಕ್ಷಕರು ಹಾಡು, ನೃತ್ಯಗಳ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು. ವಿದ್ಯಾರ್ಥಿಗಳಿಗಾಗಿ ವಿವಿಧ ಮನರಂಜನಾ ಆಟಗಳನ್ನು ಆಯೋಜಿಸಲಾಗಿತ್ತು. ಶಾಲಾ ಆಡಳಿತ ಮಂಡಳಿಯ ವತಿಯಿಂದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಸಿಹಿತಿಂಡಿ ಮತ್ತು ಐಸ್ಕ್ರೀಂ ವಿತರಿಸಲಾಯಿತು.








































































































