324 ವಿದ್ಯಾರ್ಥಿಗಳಿಗೆ 45 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ
ನೆಲ್ಯಾಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಉಪ್ಪಿನಂಗಡಿ, ಪುತ್ತೂರು ತಾಲೂಕು ಹಾಗೂ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಸಹಯೋಗದಲ್ಲಿ ಸ್ಕೌಟ್ಸ್–ಗೈಡ್ಸ್ ಮೇಳ, ಕಬ್–ಬುಲ್ಬುಲ್ ಉತ್ಸವ–2026 ಹಾಗೂ ಬೆಳ್ಳಿ ಹಬ್ಬ ಸಂಭ್ರಮಾಚರಣೆ ನ.27 ಮತ್ತು 28ರಂದು ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಯಲಿದೆ.
ನ.27ರಂದು ಪೂರ್ವಾಹ್ನ 10.15ಕ್ಕೆ ನಡೆಯಲಿರುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರು ಹಾಗೂ ಮಾಜಿ ಸಚಿವರಾದ ಪಿ.ಜಿ.ಆರ್. ಸಿಂಧ್ಯಾ ವಹಿಸಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ ಭಟ್, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಡಿ., ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸ್ಕೌಟ್ಸ್ ಆಯುಕ್ತ ಮಹಮ್ಮದ್ ತುಂಬೆ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ರಾಜ್, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪಿ.ಪಿ. ವರ್ಗೀಸ್, ನೆಲ್ಯಾಡಿ ಕಾಮಧೇನು ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಹಾಗೂ ನೆಲ್ಯಾಡಿ ವರ್ತಕ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್. ಭಾಗವಹಿಸಲಿದ್ದಾರೆ.
ಅಂದು ಸಂಜೆ 4 ಗಂಟೆಗೆ ನಗರ ಮೆರವಣಿಗೆ ನಡೆಯಲಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಸತೀಶ್ ಕೆ.ಪಿ. ಉದ್ಘಾಟಿಸಲಿದ್ದಾರೆ. ಸಂಜೆ 7 ಗಂಟೆಗೆ ಶಿಬಿರಾಗ್ನಿ ಕಾರ್ಯಕ್ರಮವನ್ನು ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ನ ವಿಕಾರ್ ರೆ.ಫಾ.ಶಾಜಿ ಮ್ಯಾಥ್ಯೂ ಉದ್ಘಾಟಿಸಲಿದ್ದಾರೆ.
ನ.28ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಕೆ. ಸೇಸಪ್ಪ ರೈ ವಹಿಸಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್. ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಡಾ.ಮೋಹನ್ ಆಳ್ವ, ಪುತ್ತೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸಿಲ್ವಿಯ ಕ್ಯಾಸ್ಟಲಿನೋ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಗೈಡ್ಸ್ ಆಯುಕ್ತೆ ವಿಮಲ ರಂಗಯ್ಯ, ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಪ್ರತಿಮ್ ಕುಮಾರ್ ಕೆ.ಎಸ್., ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸರ್ವೋತ್ತಮ ಗೌಡ ಕೆ., ನೆಲ್ಯಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಲಾಂ ಬಿಲಾಲ್, ನೆಲ್ಯಾಡಿಯ ವಕೀಲರು ಹಾಗೂ ನೋಟರಿ ಇಸ್ಮಾಯಿಲ್ ಎನ್. ಮತ್ತು ನೆಲ್ಯಾಡಿ ಸಿಆರ್ಪಿ ದೇವಕಿ ಕೆ. ಉಪಸ್ಥಿತರಿರಲಿದ್ದಾರೆ.
15ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಿಂದ ಸುಮಾರು 500 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಎರಡು ದಿನಗಳ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಲ್ಲಿ ಜೀವನ ಕೌಶಲ್ಯಗಳನ್ನು ಬೆಳೆಸುವ ಸಾಹಸಮಯ ಆಟಗಳು, ಬೆಂಕಿ ಬಳಸದೆ ಅಡುಗೆ, ಆಕರ್ಷಕ ನಗರ ಮೆರವಣಿಗೆ, ವಿದ್ಯಾರ್ಥಿಗಳ ಗ್ರಹಣ ಶಕ್ತಿಯನ್ನು ಉದ್ದೀಪನ ಗೊಳಿಸುವ ಕಿಮ್ಸ್ ಗೇಮ್ಸ್, ಸಹೋದರತೆಯನ್ನು ಬೆಳೆಸುವ ಸರ್ವಧರ್ಮ ಪ್ರಾರ್ಥನೆ, ಕರಕುಶಲ ಚಟುವಟಿಕೆಗಳು,ಧ್ವಜಸ್ತಂಭ ರಚನೆ, ರಸಪ್ರಶ್ನೆ ಇತ್ಯಾದಿ ಚಟುವಟಿಕೆಗಳು ನಡೆಯಲಿವೆ.
ಕಾರ್ಯಕ್ರಮದ ಯಶಸ್ಸಿಗೆ ಉಪ್ಪಿನಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಕೆ. ಸೇಸಪ್ಪ ರೈ, ಕಾರ್ಯಾಧ್ಯಕ್ಷೆ ನಿರ್ಮಲಾ ಕೆ., ಕಾರ್ಯದರ್ಶಿ ಪ್ರೇಮ ಬಿ., ಕೋಶಾಧಿಕಾರಿ ಜನಾರ್ದನ ಟಿ., ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಡಿ., ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು, ಸಂಚಾಲಕ ನೋಮಿಸ್ ಪಿ. ಕುರಿಯಾಕೋಸ್, ಪ್ರಾಚಾರ್ಯ ಏಲಿಯಾಸ್ ಎಂ.ಕೆ., ಮುಖ್ಯಶಿಕ್ಷಕ ತೋಮಸ್ ಎಂ.ಐ., ಮೇಳ ನಾಯಕ ವೆಂಕಟರಮಣ ಆರ್., ಆಡಳಿತ ಮಂಡಳಿ, ರಕ್ಷಕ ಶಿಕ್ಷಕ ಸಂಘ, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಸಹಕರಿಸುತ್ತಿದ್ದಾರೆ ಎಂದು ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ, ಮೇಳದ ಸಂಚಾಲಕ ಅಬ್ರಹಾಂ ವರ್ಗೀಸ್, ಎ.ಡಿ.ಸಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳ್ಳಿ ಹಬ್ಬದ ಆಚರಣೆಯ ಅಂಗವಾಗಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದವರಿಗೆ ಹಾಗೂ ಸ್ಕೌಟ್ ಆಂದೋಲನಕ್ಕೆ ವಿಶೇಷ ಕೊಡುಗೆ ನೀಡಿದ ಶಿಕ್ಷಕರನ್ನು, ವಿದ್ಯಾಸಂಸ್ಥೆಗಳನ್ನು ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯಲಿದೆ.