ನೇಸರ ಎ.03: ಶ್ರೀ ರಾಮ ಕ್ಷೇತ್ರ ಭಗವಾನ್ ನಿತ್ಯಾನಂದಲ್ಲಿ 62ನೇ ವರ್ಷದ ಶ್ರೀ ರಾಮತಾರಕ ಮಂತ್ರ ಸಪ್ತಾಹ ಹಾಗೂ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವಕ್ಕೆ ಎ.3 ರಂದು ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಕರ್ನಾಟಕ ಸರಕಾರದ ಪಂಚಾಯತ್ ರಾಜ್ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ನಂದಾ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.
ಸಂಸದ ಹಾಗೂ ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಬಿಲ್ಲವರ ಮಹಾ ಮಂಡಲ ಉಪಾಧ್ಯಕ್ಷ ಪೀತಾಂಬರ ಹೇರಾಜೆ,ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ ಮೋನಪ್ಪ ಗೌಡ, ಉಪಾಧ್ಯಕ್ಷ ಶ್ರೀನಿವಾಸ ರಾವ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ಆರಂಬೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಜಯ ರಮೇಶ್, ಜಿ. ಪ.ಮಾಜಿ ಸದಸ್ಯ ಶೈಲೇಶ್ ಕುಮಾರ್ ಕೆ, ತುಂಗಪ್ಪ ಬಂಗೇರ, ಶ್ರೀರಾಮ ಕ್ಷೇತ್ರ ಸಮಿತಿ ಜಿಲ್ಲಾ ಸಂಚಾಲಕ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ತಾಲೂಕು ಸಂಚಾಲಕ ಜಯಂತ್ ಕೋಟ್ಯಾನ್, ತಾಲೂಕು ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಪ್ರಧಾನ ಕಾರ್ಯದರ್ಶಿ ಮಂಜುನಾಥ ಶೆಟ್ಟಿ ನಿಡ್ಗಲ್, ಕಾರ್ಯದರ್ಶಿ ಚಿದಾನಂದ ಇಡ್ಯಾ, ವಾಣಿಜ್ಯ ತೆರಿಗೆ ಆಯುಕ್ತ ರಾಜು ನಾಯ್ಕ್, ಯುವ ವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷೆ ಸುಜಾತ ಅಣ್ಣಿ ಪೂಜಾರಿ, ಪ್ರಮುಖರಾದ ವಕೀಲ ಭಗೀರಥ ಜಿ, ವಕೀಲ ಅನಿಲ್ ಯು, ರಾಜೇಶ್ ಮೂಡುಕೋಡಿ, ರತ್ನಾಕರ ಬಣ್ಣನ್, ಪ್ರಶಾಂತ್ ಪಾರೆಂಕಿ, ಕೇಶವ ಗೌಡ ಪಿ, ಟ್ರಸ್ಟಿ ತುಕಾರಾಮ್ ಸಾಲಿಯಾನ್, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕರುಗಳಾದ ವಸಂತ ಪೂಜಾರಿ ಪುದುವೆಟ್ಟು, ಪುರುಷೋತ್ತಮ ಧರ್ಮಸ್ಥಳ, ಗುರುಪ್ರಸಾದ ಕೋಟ್ಯಾನ್ ಉಜಿರೆ, ಧನಲಕ್ಷ್ಮೀ ಜನಾರ್ಧನ, ಸೀತಾರಾಮ ಬಿ.ಎಸ್. ಬೆಳಾಲು, ವಿವಿಧ ಭಜನಾ ಮಂಡಳಿಯ ಸದಸ್ಯರು, ರಾಮಕ್ಷೇತ್ರ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಕ್ತರು ಹಾಜರಿದ್ದರು.
ಎ.10 ರ ವರೆಗೆ 7 ದಿನಗಳಲ್ಲಿ ಅಹೋರಾತ್ರಿ ಭಜನೆ,ಉತ್ಸವ, ರಥೊತ್ಸವ, ಬ್ರಹ್ಮ ರತೋತ್ಸವ ನಡೆಯಲಿದೆ.