ನೇಸರ ನ 5: ನವಂಬರ್ 08 ರಿಂದ ಎಲ್ ಕೆಜಿ, ಯುಕೆಜಿ ತರಗತಿ ಆರಂಭಕ್ಕೆ ಸರಕಾರದಿಂದ ಪೋಷಕರಿಗೆ ಗೈಡ್ ಲೈನ್ಸ್ ಬಿಡುಗಡೆ. ಶಾಲೆಗಳಲ್ಲಿ ದೈನಂದಿನ ವೇಳಾಪಟ್ಟಿಯಂತೆ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖಾ ಆಯುಕ್ತರು ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ, ಶಿಕ್ಷಣ ಸಚಿವರು, ಆರೋಗ್ಯ ಸಚಿವರು, ಇಲಾಖೆಯ ಕೋವಿಡ್ ತಾಂತ್ರಿಕ ಸಹ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಸಿ ಇನ್ನು ಅಂಗವಾಡಿ ಕೇಂದ್ರಗಳನ್ನು ನ.8 ರಿಂದ ಭೌತಿಕವಾಗಿ ಪ್ರಾರಂಭಿಸಲು ಆದೇಶ ಮಾಡಿರುವ ಹಿನ್ನಲೆ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆಗಳಲ್ಲಿನ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿನ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಸರಕಾರ ಅನುಮತಿ ನೀಡಿದೆ. ಕೋವಿಡ್ ನಿಯಾಮನುಸಾರ ಗೈಡ್ ಲೈನ್ಸ್ ಬಿಡುಗಡೆ ಮಾಡಿರುವ ಸರಕಾರ, ನವಂಬರ್ 08 ರಿಂದ ಎಲ್‌ಕೆಜಿ,ಯುಕೆಜಿ ತರಗತಿ ಆರಂಭಕ್ಕೆ ಸರಕಾರದಿಂದ ಪೋಷಕರಿಗೆ ಗೈಡ್ ಲೈನ್ಸ್ ಬಿಡುಗಡೆ ಹಾಗೂ ಎಲ್‌ಕೆಜಿ ಮತ್ತು ಯುಕೆಜಿ ಕೇಂದ್ರವನ್ನು ರಾಸಾಯನಿಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ. ಪೋಷಕರಿಗೂ ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ ಆಗಿರಬೇಕು. ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ತರಗತಿಗಳು ಆರಂಭವಾಗಲಿದೆ. ಬೆಳಗ್ಗೆ 9:30 ರಿಂದ ಮಧ್ಯಾಹ್ನ 3:30 ರವರೆಗೆ ತರಗತಿ ನಡೆಸಬೇಕು ಎಂದು ಸೂಚನೆ ನೀಡಿದ್ದು, ಕೋವಿಡ್ ಲಕ್ಷಣಗಳಿರುವ ಮಕ್ಕಳಿಗೆ ತರಗತಿಗೆ ಪ್ರವೇಶವಿಲ್ಲ ಎಂದು ತಿಳಿಸಲಾಗಿದೆ.