ಕೊಕ್ಕಡ ಗ್ರಾಮದ ಉಪ್ಪಾರಪಳಿಕೆಯಲ್ಲಿ ಭಗವಾಧ್ವಜ ವನ್ನು ನೆಲಕ್ಕುರುಳಿಸಿ ಕಟ್ಟೆಗೆ ಹಾನಿ

ಶೇರ್ ಮಾಡಿ

ನೇಸರ ಎ.18: ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್ನಲ್ಲಿದ್ದ ಭಗವಾಧ್ವಜ ಕಟ್ಟೆಗೆ ಹಾನಿಗೈದು ಕಂಬ ಹಾಗೂ ಭಗವಾಧ್ವಜವನ್ನು ಕಿಡಿಗೇಡಿಗಳು ನೆಲಕ್ಕುರುಳಿಸಿದ ಘಟನೆ ಎ.17ರ ರಾತ್ರಿ ಸಂಭವಿಸಿದೆ.
ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಎಂಬಲ್ಲಿ ಸ್ಥಳೀಯ ಹಿಂದೂ ಯುವಕರು ಸೇರಿಕೊಂಡು ಭಗವಾಧ್ವಜವನ್ನು ಸ್ಥಾಪಿಸಿದ್ದರು. ಶನಿವಾರ ರಾತ್ರಿ ಈ ಭಗವಾಧ್ವಜ ಹಾಗೂ ಅದರ ಕಂಬ ಬುಡ ಸಮೇತ ಮುರಿದು ರಸ್ತೆಗೆ ಬಿದ್ದಿತ್ತು. ಇದನ್ನು ಗಮನಿಸಿದ ಸ್ಥಳೀಯರು ಇದೊಂದು ಉದ್ದೇಶಪೂರ್ವಕ ಕೃತ್ಯ ವೆಂದು ಆರೋಪಿಸಿದ್ದಾರೆ.

ಈ ದಿನ ಕೊಕ್ಕಡದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳದ ಸಂಕ್ರಾಂತಿ ಮೈದಾನದಲ್ಲಿ ಹಿಂದೂ ಜಾಗರಣ ವೇದಿಕೆ ಹಾಗೂ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕದ ವತಿಯಿಂದ ಅಂತರ್ ರಾಜ್ಯ ಮಟ್ಟದ ಬೃಹತ್ ಹೊನಲು ಬೆಳಕಿನ ಹಗ್ಗ ಜಗ್ಗಾಟ ನಡೆಯುತ್ತಿತ್ತು. ಈ ಪಂದ್ಯಾಟದ ಸಭಾ ಕಾರ್ಯಕ್ರಮಕ್ಕೆ‌ ಆಗಮಿಸಿದ ಬೆಳ್ತಂಗಡಿ ಶಾಸಕರಿಗೆ ಉಪ್ಪಾರಪಳಿಕೆಯಲ್ಲಿ ನಡೆದ ಘಟನೆಯ ಬಗ್ಗೆ ಕಾರ್ಯಕರ್ತರು ವಿವರಿಸಿದ್ದು ಶಾಸಕರು ವೇದಿಕೆಯಲ್ಲಿಯೇ ಕೃತ್ಯವನ್ನು ಖಂಡಿಸಿದರು. ಧ್ವಜವು ಹಿಂದುಗಳ ಶಕ್ತಿ ಮತ್ತು ಪ್ರೇರಣೆಯ ಸಂಕೇತ ಮಾತ್ರವಲ್ಲದೆ ನಮ್ಮ ಹೃದಯದಲ್ಲಿ ಅದಕ್ಕೆ ಆರಾಧನೆಯ ಸ್ಥಾನವನ್ನು ನೀಡಿದೆ. ಹಾಗಾಗಿ ಮತ್ತದೇ ಹಾಳುಗೆಡಹಿದ ಜಾಗದಲ್ಲಿ ಭಗವಾಧ್ವಜವನ್ನು ಹಾರಾಡುವಂತೆ ಮಾಡುವುದಾಗಿ ಹೇಳಿದರು. ಅಲ್ಲದೆ ಇನ್ನು ಮುಂದೆ ಇಂತಹ ದುಷ್ಕೃತ್ಯ ಮರುಕಳಿಸಿದರೆ ಪರಿಣಾಮ ಬೇರೆ ರೀತಿಯೇ ಆಗಿರುತ್ತದೆ ಎಂದು ದುಷ್ಕರ್ಮಿಗಳಿಗೆ ಈ ಸಂದರ್ಭ ಎಚ್ಚರಿಕೆ ನೀಡಿದರು.

ವೀಕ್ಷಿಸಿ SUBSCRIBERS ಮಾಡಿ

—ಜಾಹೀರಾತು—

Leave a Reply

error: Content is protected !!