ನಾಳೆ ದ್ವಿತೀಯ ಪಿಯು ಪರೀಕ್ಷೆ ಆರಂಭ: ಜಿಲ್ಲೆಗಳಲ್ಲಿ ಸರ್ವಸಿದ್ಧತೆ

ಶೇರ್ ಮಾಡಿ

ನೇಸರ ಎ21: ದ್ವಿತೀಯ ಪಿಯುಸಿ ಪರೀಕ್ಷೆ ಎ.22ರಿಂದ ಮೇ 18ರ ವರೆಗೆ ನಡೆಯಲಿದ್ದು, ಜಿಲ್ಲೆಗಳಲ್ಲಿ ಸರ್ವಸಿದ್ಧತೆ ಮಾಡಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31,308 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯ 12 ಸರಕಾರಿ, 23 ಅನುದಾನಿತ ಮತ್ತು 16 ಅನುದಾನ ರಹಿತ ಕಾಲೇಜುಗಳ ಸಹಿತ ಒಟ್ಟು 51 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅವುಗಳಿಗೆ 14 ಮಂದಿ ರೂಟ್‌ ಆಫೀಸರ್‌ಗಳನ್ನು ನೇಮಕ ಮಾಡಲಾಗಿದೆ.
ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಕೊರೊನಾ ಸುರಕ್ಷತಾ ಮಾರ್ಗಸೂಚಿಗಳನ್ನು ಅಳವಡಿಸಲಾಗಿದೆ. ಪ್ರಶ್ನೆಪತ್ರಿಕೆ ವಿತರಿಸುವ ತಂಡ, ಪರೀಕ್ಷ ಕೇಂದ್ರಕ್ಕೆ ವೀಕ್ಷಕರ ನೇಮಕ, ಪ್ರಶ್ನೆಪತ್ರಿಕೆ ಪಾಲಕರ ತಂಡ, ಜಿಲ್ಲೆಯ ಮಾರ್ಗಾಧಿಕಾರಿಗಳ ತಂಡ, ಪರೀಕ್ಷೆಯ ಪರಿವೀಕ್ಷಣೆಗೆ ಸಂಚಾರಿ ಜಾಗೃತ ದಳದ ನಿಯೋಜನೆ ಮಾಡಲಾಗಿದೆ.
ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆಯ ಬಂಡಲ್‌ ತೆರೆಯುವಾಗ ಹಾಗೂ ಉತ್ತರಪತ್ರಿಕೆ ಸ್ವೀಕರಿಸಿ, ಬಂಡಲ್‌ ಮಾಡುವಾಗ ಸಿಸಿ ಕೆಮರಾ ವೀಕ್ಷಣೆಯಲ್ಲಿ ನಿರ್ವಹಿಸುವಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ. ಪರೀಕ್ಷ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ನಿಷೇಧಾಜ್ಞೆ ಜಾರಿ
ಜಿಲ್ಲೆಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆೆ.

 

—ಜಾಹೀರಾತು—

Leave a Reply

error: Content is protected !!