ಪಿಯುಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಯಶಸ್ವಿನ ಮುಖ್ಯ ಹಂತ. ಪರೀಕ್ಷೆಗಳನ್ನು ಯಶಸ್ವಿಯಾಗಿ, ನಿರ್ಭೀತಿಯಿಂದ ಬರೆಯಿರಿ ಮತ್ತು ಸಾಧ್ಯವಾದಷ್ಟು ಹೆಚ್ಚು ಅಂಕ ಪಡೆಯಲು ಪ್ರಯತ್ನಿಸಿ. ಕಳೆದ ವರುಷ ಕೊರೊನಾದಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿಲ್ಲ. ಇದು ವಿದ್ಯಾರ್ಥಿಗಳ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಪ್ರಥಮ ಪಿಯುಸಿ ಯ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆಯದೇ ಪಾಸ್ ಆಗಿರುವುದರಿಂದ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹೆಚ್ಚಿನ ತಯಾರಿ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಸುಲಭಗೊಳಿಸಲು ಇಲಾಖೆ ಬಹುಆಯ್ಕೆಯ ಪ್ರಶ್ನೆಗಳನ್ನು ನೀಡಿರುವುದು ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ಗಳಿಸಲು ಸಹಾಯವಾಗುತ್ತದೆ. ಪರೀಕ್ಷೆಯನ್ನು ಎದುರಿಸುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು.
– ಎಲಿಯಾಸ್ ಎಂ ಕೆ, ಪ್ರಾಂಶುಪಾಲರು ಸಂತ ಜಾರ್ಜ್ ಪದವಿಪೂರ್ವ ಕಾಲೇಜು, ನೆಲ್ಯಾಡಿ
ನೇಸರ ಎ.22: ರಾಜ್ಯಾದ್ಯಂತ ಶುಕ್ರವಾರದಿಂದ (ಎ.22) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು. ಒಟ್ಟು 1,076 ಕೇಂದ್ರಗಳಲ್ಲಿ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ.
ಕಡಬ ತಾಲೂಕಿನ ಸಂತ ಜಾರ್ಜ್ ಪದವಿಪೂರ್ವ ಕಾಲೇಜ್, ನೆಲ್ಯಾಡಿ ಇದು ಪರೀಕ್ಷೆ ಕೇಂದ್ರವಾಗಿದ್ದು. ಸಕಲ ರೀತಿಯಲ್ಲಿ ಸಿದ್ಧವಾಗಿದ್ದು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದೆ. ಇಲ್ಲಿ ಜ್ಞಾನೋದಯ ಬೆಥನಿ ಪಿಯು ಕಾಲೇಜ್, ಸಂತ ಜಾರ್ಜ್ ಪದವಿಪೂರ್ವ ಕಾಲೇಜ್, ಸರಕಾರಿ ಪದವಿ ಪೂರ್ವ ಕಾಲೇಜ್ ಅರಸಿನಮಕ್ಕಿ, ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ಕಡ, ಸರಕಾರಿ ಪದವಿ ಪೂರ್ವ ಕಾಲೇಜು ಕೋಣಾಲು ಗಳ ಒಟ್ಟು 5 ಕಾಲೇಜುಗಳ ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆ ಬರೆಯುತ್ತಿದ್ದು. ಇದರಲ್ಲಿ ಒಟ್ಟು 304 ವಿದ್ಯಾರ್ಥಿಗಳ ಪೈಕಿ ಹುಡುಗರ ಸಂಖ್ಯೆ 153, ಹುಡುಗಿಯರ ಸಂಖ್ಯೆ 151, ಪರೀಕ್ಷೆಯನ್ನು ಬರೆಯುತ್ತಿದ್ದು. ಮುಖ್ಯ ಅಧೀಕ್ಷಕರಾಗಿ ಸಂತ ಜಾರ್ಜ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಎಲಿಯಾಸ್ ಎಂ ಕೆ ಹಾಗೂ ಸಹ ಮುಖ್ಯ ಅಧೀಕ್ಷಕರಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ದಕಟ್ಟೆಯ ಸಂಜಯ್ ಪಿ.ಎಸ್ ರವರು ಕಾರ್ಯನಿರ್ವಹಿಸುತ್ತಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯು ಪೊಲೀಸ್ ಇಲಾಖೆ ಸಹಯೋಗದಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಪ್ರಶ್ನೆಪತ್ರಿಕೆಗಳನ್ನು ಇಡುವ ಖಜಾನೆಯ ಒಳಗೆ ಹಾಗೂ ಹೊರಗೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ದಿನದ 24 ಗಂಟೆಯೂ ಸಿಸಿಟಿವಿ ವ್ಯವಸ್ಥೆ ಮಾಡಲಾಗಿದೆ.
—ಜಾಹೀರಾತು—