ನೇಸರ ಮೇ 27: ಬೆಳ್ತಂಗಡಿ ತಾಲೂಕು ತಹಶೀಲ್ದಾರರ ನೇತೃತ್ವದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮೇ.27 ರಂದು ನಡೆಯಿತು.
ಬೆಳ್ತಂಗಡಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅಧಿಕಾರಿಗಳ ಗ್ರಾಮ ವಾಸ್ತವ್ಯದ ಉದ್ದೇಶಗಳನ್ನು ಸಭೆಗೆ ವಿವರಿಸಿದರು.
ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಹೇಮಚಂದ್ರ, ಶಿಶು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಿಯಾ ಆಗ್ನೇಸ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಮೆಸ್ಕಾಂ ಇಲಾಖೆಯ ಕ್ಲೆಂಮೆಂಟ್ ಬೆಂಜಮಿನ್ ಬ್ರಾಗ್ಸ್, ಭೂಮಾಪನ ಇಲಾಖೆಯ ರೇಣುಕಾ ನಾಯ್ಕ್, ಕೃಷಿ ಇಲಾಖೆಯ ಚಿದಾನಂದ ಹೂಗಾರ್, ತೋಟಗಾರಿಕೆ ಇಲಾಖೆಯ ಚಂದ್ರಶೇಖರ, ಅಬಕಾರಿ ಇಲಾಖೆಯ ಶಿವಶಂಕರ್, ಪಶುಸಂಗೋಪನೆ ಇಲಾಖೆಯ ಯಾದವ ಗೌಡ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಸುಜಿತ್ ಕುಮಾರ್, ಇಲಾಖೆಗಳಿಂದ ಸಾರ್ವಜನಿಕರಿಗೆ ಸಿಗುವಂತ ಸೌಲಭ್ಯಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರು ಕೇಳಿದ ಪ್ರಶ್ನೆಗಳಿಗೆ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಉತ್ತರಿಸಿದರು.
ಸಾರ್ವಜನಿಕರಿಂದ ಆಕ್ರೋಶ :
ಅರಣ್ಯ ಇಲಾಖಾ ಅಧಿಕಾರಿಯಿಂದ ಹೆಚ್ಚಿನ ಮಾಹಿತಿ ಸಾರ್ವಜನಿಕರು ನಿರೀಕ್ಷಿಸಿದ್ದರು, ಆದರೆ ಸಂಬಂಧಪಟ್ಟ ಇಲಾಖೆಯಿಂದ ಯಾರು ಉಪಸ್ಥಿತರಿಲ್ಲದ ಕಾರಣ ಕೆಲಕಾಲ ಜನರಿಂದ ಆಕ್ರೋಶ ವ್ಯಕ್ತವಾಯಿತು.
ಸನ್ಮಾನ:
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿ ನಿಶ್ಮಿತ ಹಾಗೂ 33 ವರ್ಷಗಳ ಕಾಲ ಹೋಂ ಗಾರ್ಡ್ ನಲ್ಲಿ ಸೇವೆ ಸಲ್ಲಿಸಿ ಚಿನ್ನದ ಪದಕ ಪಡೆದ ಜಯಾನಂದ ರವರನ್ನು ಸನ್ಮಾನಿಸಲಾಯಿತು.
ಸರಕಾರದಿಂದ ದೊರೆಯುವ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ತಹಶೀಲ್ದಾರ್ ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಸಿನಮಕ್ಕಿ ಗ್ರಾ.ಪಂ.ನ ಉಪಾಧ್ಯಕ್ಷೆ ಶ್ರೀಮತಿ ಶಕುಂತಲಾ ವಹಿಸಿದ್ದರು. ವೇದಿಕೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾ.ಪಂ.ನ ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿ ರವಿ ನಿಂಗಣ್ಣ ಗೌಡ, ಕಾರ್ಯದರ್ಶಿ ವೆಂಕಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು.
ಗ್ರಾ.ಪಂ.ಸದಸ್ಯ ಸುಧೀರ್ ಕುಮಾರ್ ಸ್ವಾಗತಿಸಿ, ವೃಷಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿದರು, ಕಂದಾಯ ಅಧಿಕಾರಿ ಪಾವಡಪ್ಪ ದೊಡ್ಡಮನಿ ವಂದಿಸಿದರು.
ಜಾಹೀರಾತು