ನೇಸರ ಜೂ.04: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಆಶ್ರಯದಲ್ಲಿ ವಿಶ್ವ ಬೈಸಿಕಲ್ ದಿನಾಚರಣೆಯನ್ನು ದಿನಾಂಕ 03-06-2022ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ವಿಶೇಷತೆ ಕುರಿತು ಮಾತನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದಲೆಫ್ಟಿನೆಂಟ್ ಸೀತಾರಾಮ ಎಂ ಡಿ ಜಾಥಾಕ್ಕೆ ಚಾಲನೆಯನ್ನು ನೀಡಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಶ್ರೀಮತಿ ಮಮತಾ ಕೆ ಹಾಗೂ ಸದಸ್ಯರು, ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಎನ್ ಎಸ್ ಎಸ್ ಘಟಕಾಧಿಕಾರಿ ಸಂಜೀವ ಕೆ ಸೈಕಲ್ ಜಾಥಾದ ನೇತೃತ್ವವನ್ನು ವಹಿಸಿದ್ದರು. ಭೂ ತಾಪಮಾನ ನಿಯಂತ್ರಣ ಹಾಗೂ ಆನಾರೋಗ್ಯಕರ ಜೀವನ ಶೈಲಿಯನ್ನು ತಡೆಗಟ್ಟುವ ಉದ್ದೇಶದಿಂದ ಹಮ್ಮಿಕೊಂಡ ಈ ಜಾಥಾದಲ್ಲಿ ಕಾಲೇಜಿನ ಪ್ರಾಂಶುಪಾಲರು, ಬೋಧಕ- ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಭಾಗವಹಿಸಿ ಕಾಲೇಜಿನಿಂದ ಹೊರಟು ಕೆ ವಿ ಜಿ ವೃತ್ತವಾಗಿ, ಸುಳ್ಯ ನಗರದ ಪ್ರಮುಖ ರಸ್ತಗಳಲ್ಲಿ ಹಾದು ಕಾಲೇಜಿನಲ್ಲಿ ಸಮಾಪನಗೊಂಡಿತು.
ಜಾಹೀರಾತು