ಹೈಲೈಟ್ಸ್:
- ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ.
- ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ.
- 5 ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ನೇಸರ ಜೂ.04: 2022-23ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ sw.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. 5ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ತರಗತಿ ಪ್ರಮಾಣ ಪತ್ರ ಅಥವಾ ಪ್ರವೇಶ ರಶೀದಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಇತರೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಗತ್ಯ ಮಾಹಿತಿಗಳು, ಅರ್ಜಿಗೆ ಕೊನೆ ದಿನಾಂಕ, ಇತರೆ ಯಾವುದೇ ಮಾಹಿತಿಗಳನ್ನು ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
5 ರಿಂದ 10ನೇ ತರಗತಿಯ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಕುಟುಂಬ ಆದಾಯ ರೂ. ಆರು ಲಕ್ಷ ಮೀರಿರಬಾರದು.
ವಿದ್ಯಾರ್ಥಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.
ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಕಾರ್ಡ್ ಸಲ್ಲಿಸುವುದು ಕಡ್ಡಾಯ.
ವಿದ್ಯಾರ್ಥಿಗಳು ಕಡ್ಡಾಯವಾಗಿ ಹಿಂದಿನ ವರ್ಷದ ಅಂಕ ಪಟ್ಟಿಯನ್ನು ಲಗತ್ತಿಸಬೇಕು.
ಮತ್ತು ಇತ್ತಿಚಿನ ಭಾವಚಿತ್ರವನ್ನು ಅಪಲೋಡ್ ಮಾಡಬೇಕು.
ಜಾಹೀರಾತು