ಸುಬ್ರಹ್ಮಣ್ಯ: ವಿಶ್ವ ಪರಿಸರ ದಿನಾಚರಣೆ

ಶೇರ್ ಮಾಡಿ

ನೇಸರ ಜೂ.05: ಕುಕ್ಕೇಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್ ಕ್ರಾಸ್ ಘಟಕ, ಎಸ್ ಎಸ್ ಪಿಯು ಕಾಲೇಜು ಸುಬ್ರಹ್ಮಣ್ಯ, ಅರಣ್ಯ ಇಲಾಖೆ ಸುಬ್ರಹ್ಮಣ್ಯ ಜಂಟಿಯಾಗಿ ದಿನಾಂಕ 5.6.2022 ರಂದು ವಿಶ್ವ ಪರಿಸರ ದಿನಾಚರಣೆ ಯನ್ನು ಆಚರಿಸಿತು.

ಮೊದಲಿಗೆ ಎಸ್ ಎಸ್ ಪಿಯು ಕಾಲೇಜಿನ ಆವರಣದಲ್ಲಿ ಗಿಡ ನೆಟ್ಟು ತದನಂತರ ಸುಬ್ರಹ್ಮಣ್ಯದ ದೇವರಗದ್ದೆ ಅರಣ್ಯದಲ್ಲಿ ಹಲವಾರು ರೀತಿಯ ಬೀಜ ಬಿತ್ತನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಲಲಿತ ಕುಂಡಡ್ಕ, ಸುಬ್ರಹ್ಮಣ್ಯ ಅರಣ್ಯ ವಲಯಾಧಿಕಾರಿ ರಾಘವೇಂದ್ರ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಎಚ್ಎಲ್ ವೆಂಕಟೇಶ್, ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀಮತಿ ಆರತಿ ಕೆ, ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಶ್ರೀಮತಿ ಕೃತಿಕಾ, ಶ್ರೀಮತಿ ವನಿತಾ, ಎಸ್ ಎಸ್ ಪಿ ಯು ಆಫೀಸ್ ಸಿಬ್ಬಂದಿ ಮಹೇಶ್, ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಾರ್ಗದರ್ಶನವನ್ನು ನೀಡಿ ಸಹಕರಿಸಿದರು, ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು, ಯುವ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಹಲವು ರೀತಿಯ ಗಿಡಗಳನ್ನು ನೆಟ್ಟು, ಅರಣ್ಯದಲ್ಲಿ ಬೀಜ ಬಿತ್ತನೆ ಮೂಲಕ ಪರಿಸರ ದಿನವನ್ನು ಆಚರಿಸಿದರು.

ವೀಕ್ಷಿಸಿ SUBSCRIBERS ಮಾಡಿ

ಜಾಹೀರಾತು

Leave a Reply

error: Content is protected !!