ನೇಸರ ಜೂ.07: ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ 2022-23ನೇ ಸಾಲಿನ ತರಗತಿಗಳು ಜೂನ್ 9 ರಿಂದ ಆರಂಭವಾಗಲಿವೆ. ತರಗತಿಗಳ ಆರಂಭಕ್ಕೆ ಪಿಯು ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಶೈಕ್ಷಣಿಕ ಮೊದಲ ಅವಧಿ ಜೂನ್ 9 ರಿಂದ ಸೆಪ್ಟೆಂಬರ್ 30 ರ ವರೆಗೆ ನಡೆಯಲಿದೆ. ಎರಡನೇ ಅವಧಿ ಅಕ್ಟೋಬರ್ 13 ರಿಂದ 2023ರ ಮಾರ್ಚ್ 31ರವರೆಗೆ ನಿಗದಿಪಡಿಸಲಾಗಿದೆ. ಅಕ್ಟೋಬರ್ 1 ರಿಂದ 12 ರವರೆಗೆ ಮಧ್ಯಂತರ ರಜೆ ಇರಲಿದೆ. ಎಪ್ರೀಲ್ 1 ರಿಂದ ಬೇಸಿಗೆ ರಜೆ ಆರಂಭವಾಗಲಿದೆ.
ಇನ್ನೂ ಎಸ್‌ಎಸ್‌ಎಲ್‌ಸಿ ನಂತರ ಪಿಯು ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಹಿಜಾಬ್ ವಿವಾದದಲ್ಲಿ ಹೈಕೋರ್ಟ್ ನೀಡಿರುವ ತೀರ್ಪಿನ ಅನ್ವಯ ಸಮವಸ್ತ್ರಗಳನ್ನು ಧರಿಸುವಂತೆ ಸೂಚಿಸಿ, ಪದವಿ ಪೂರ್ಣ ಶಿಕ್ಷಣ ಇಲಾಖೆಯು 2022-23ನೇ ಶೈಕ್ಷಣಿಕೆ ವರ್ಷದ ದಾಖಲಾತಿ ಮಾರ್ಗಸೂಚಿ ಪ್ರಕಟಿಸಿತ್ತು.
ಜೂನ್ 1 ರಿಂದ ಪಿಯು ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಜೂನ್ 15 ಕೊನೆಯ ದಿನವಾಗಿದೆ. ದಾಖಲಾತಿ ಶುಲ್ಕವಿಲ್ಲದೆ ದಾಖಲಾತಿ ಪಡೆಯಲು ಜೂನ್ 15 ಕೊನೆಯ ದಿನವಾಗಿದೆ. ಇನ್ನೂ ಜೂನ್ 9 ರಿಂದ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿವೆ.
ಜಾಹೀರಾತು