ನೇಸರ ಜೂ.10: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ಸ್ವಾಗತಿಸುವ “ಪ್ರಾರಂಭೋತ್ಸವ” ಕಾರ್ಯಕ್ರಮವು ನಡೆಯಿತು. ವಿಶೇಷವಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ ಕೆ ಯವರು, “ವಿದ್ಯಾರ್ಥಿಗಳಿಗೆ ಈ ಬಾರಿ ಯಾವುದೇ ಕೊರತೆಗಳು ಆಗದಂತೆ ಈ ವರ್ಷ ಯೋಜನಾಬದ್ಧವಾಗಿದೆ. ಶೈಕ್ಷಣಿಕ ವರ್ಷದಲ್ಲಿ ನಡೆಯುವ ಎಲ್ಲಾ ಪಠ್ಯ- ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು. ಅದಲ್ಲದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಆಯೋಜನೆ ಮಾಡಿ ಮಾದರಿಯಾಗಿದ್ದಾರೆ. ಇದೇ ತರಹ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಕಾರ್ಯಕ್ರವೃತ್ತರಾಗಬೇಕು” ಎಂದು ಹೇಳಿ ಶುಭಹಾರೈಸಿದರು.
ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀ ಹರಿನಾರಾಯಣ ಆಚಾರ್ ರವರು ಹಿತನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ನೂತನ ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಸ್ವಾಗತಿಸಲಾಯಿತು.
ಕಾರ್ಯಕ್ರಮದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ಮನೋರಂಜನೆ ಮತ್ತು ಚಟುವಟಿಕೆಗಳು ಅಡಕವಾಗಿದ್ದವು. ದ್ವಿತೀಯ ಪಿಯುಸಿಯ ಸಿಂಚನಾ ಜಿ ಎ ಮತ್ತು ತಂಡದವರು ಪ್ರಾರ್ಥನೆ ನೆರವೇರಿಸಿದರು. ಕಲಾ ವಿಭಾಗದ ಧನ್ಯಶ್ರೀ ಸ್ವಾಗತಿಸಿದರು. ನೂತನ ವಿದ್ಯಾರ್ಥಿಗಳಿಗೆ ಕಾಲೇಜಿನ ಪರಿಚಯವನ್ನು ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಲಿಂಚನಾ ಮಾಡಿದರು. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಂಧ್ಯಾ ಧನ್ಯವಾದ ಸಮರ್ಪಿಸಿದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ಧನ್ಯಶ್ರೀ ಮತ್ತು ದಕ್ಷ ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು