ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ಶೇರ್ ಮಾಡಿ

ನೇಸರ ಜೂ.13: ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಪದವಿಪೂರ್ವ ಕಾಲೇಜು ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.
ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗಗಳಿಗೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಗೆ ಆದರದಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ವಿದ್ಯಾಸಂಸ್ಥೆಯ ಬಗ್ಗೆ ಮಾಹಿತಿ ನೀಡಲಾಯಿತು. ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ಅಬ್ರಹಾಂ ವರ್ಗೀಸ್ ರವರು ಮಾತನಾಡುತ್ತಾ, ಪಿಯುಸಿ ಹಂತದಲ್ಲಿ ಕಲಿಯುವ ವಿದ್ಯಾರ್ಥಿಗಳೆಲ್ಲರೂ ಹದಿಹರೆಯದ ಮಕ್ಕಳು ಆಗಿರುವುದರಿಂದ ಪೋಷಕರು ತಮ್ಮ ಮಕ್ಕಳ ಜೊತೆ ಮಿತ್ರರಂತೆ ವರ್ತಿಸುವುದರಿಂದ ಮಕ್ಕಳಲ್ಲಿ ಹೆತ್ತವರ ಬಗ್ಗೆ ಒಲವು, ಗೌರವ ಹೆಚ್ಚಾಗಿ ದೇಶದ ಉತ್ತಮ ಪ್ರಜೆಗಳಾಗಿ ಮೂಡಿ ಬರುವುದರಲ್ಲಿ ಸಂದೇಹವಿಲ್ಲ ಎಂದು ನುಡಿದರು. “ಪ್ರಾರ್ಥಿಸು ಪರಿಶ್ರಮಿಸು ಪ್ರಕಾಶಿಸು” ಎಂಬ ಸಂಸ್ಥೆಯ ಧ್ಯೇಯ ವಾಕ್ಯವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಭಗವಂತನಲ್ಲಿ ಕಣ್ಣೀರಿಟ್ಟು ಪ್ರಾರ್ಥಿಸಿದರೆ, ಭಗವಂತನು ನಮಗೆ ಧಾರಾಳವಾಗಿ ಅನುಗ್ರಹಿಸುವುದರಲ್ಲಿ ಸಂದೇಹವಿಲ್ಲ ಎಂದು ನುಡಿದರು. ಹದಿಹರೆಯದ ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು ಆಗುವುದು ಸಹಜ, ಯವ್ವನವು ಪ್ರಕೃತಿಯ ಕೊಡುಗೆಯಾಗಿದೆ, ಹದಿಹರೆಯದ ಪ್ರಾಯದಲ್ಲಿ ಮನಸ್ಸನ್ನು ವಿದ್ಯಾಭ್ಯಾಸದ ಕಡೆಗೆ ಕೇಂದ್ರೀಕರಿಸಿ ಉತ್ತಮವಾದ ಅಂಕಗಳನ್ನು ಪಡೆದು ಹೆತ್ತವರಿಗೆ ಹಾಗೂ ವಿದ್ಯಾಸಂಸ್ಥೆಗೆ ಕೀರ್ತಿಯನ್ನು ತರುವ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಕಾಲೇಜಿನ ಎಲ್ಲಾ ಉಪನ್ಯಾಸಕರನ್ನು ಪೋಷಕರಿಗೆ ಪರಿಚಯಿಸಿದರು.

ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎಲಿಯಾಸ್ ಎಂ ಕೆ ರವರು ಕಾಲೇಜಿನ ಸೌಲಭ್ಯಗಳು ಹಾಗೂ ಶಿಸ್ತಿನ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಕಲಾ ಮತ್ತು ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿಗೆ ದಾಖಲಾದ ಎಸ್ ಎಸ್ ಎಲ್ ಸಿ
ಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಎಲ್ಲಾ ವಿದ್ಯಾರ್ಥಿಗಳ ಪರವಾಗಿ ಗುಲಾಬಿ ಹೂವು, ಟಿಪ್ಪಣಿಪುಸ್ತಕ ಹಾಗೂ ಪೆನ್ನು ನೀಡಿ ಸ್ವಾಗತಿಸಲಾಯಿತು.

ಕಲಾವಿಭಾಗದಲ್ಲಿ ಹೇಮಲತಾ ಇವರನ್ನು ದ್ವಿತೀಯ ಪಿಯುಸಿ ಕಲಾ ವಿಭಾಗದ ಶ್ರೇಯ ಎಂ. ಇ, ವಾಣಿಜ್ಯ ವಿಭಾಗದ ತೇಜಸ್ವಿನಿ, ನಿಕ್ಷಿತ್, ಕೀರ್ತನ್ ಇವರನ್ನು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಮಾನ್ಯ, ಫಿರೋಝ ಮತ್ತು ನಿಶಾ ಸಿ ಜೆ ಇವರು ಗುಲಾಬಿ ಹೂವನ್ನು ನೀಡಿ ಎಲ್ಲಾ ವಿದ್ಯಾರ್ಥಿಗಳ ಪರವಾಗಿ ಸಂಸ್ಥೆಗೆ ಸ್ವಾಗತಿಸಿದರು.
ಪದವಿಪೂರ್ವ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಜೆಸಿಂತಾ.ಕೆ ಜೆ. ಸ್ವಾಗತಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಇತಿಹಾಸ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಕನ್ನಡ ಉಪನ್ಯಾಸಕ ಚೇತನ್ ಕುಮಾರ್ ಟಿ. ಕಾರ್ಯಕ್ರಮ ನಿರೂಪಿಸಿದರು.

ವೀಕ್ಷಿಸಿ SUBSCRIBERS ಮಾಡಿ🙏🏻

ಜಾಹೀರಾತು

Leave a Reply

error: Content is protected !!