ನೇಸರ ಜೂ. 17: ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2022 ಫಲಿತಾಂಶವನ್ನು ಯಾವಾಗ ಬಿಡುಗಡೆ ಮಾಡುತ್ತದೆ ಎಂದು ವಿದ್ಯಾರ್ಥಿಗಳು ಕಾದು ಕುಳಿತಿದ್ದರು. ಫಲಿತಾಂಶವನ್ನು ನಾಳೆಯೇ ಅಂದರೆ ಜೂನ್ 18 ರಂದೇ ಬಿಡುಗಡೆ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಆದರೆ ಎಷ್ಟು ಗಂಟೆಗೆ ಫಲಿತಾಂಶ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಲಾಗಿಲ್ಲ.
2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತಾಯವಾಗಿದ್ದವು. ಇತ್ತ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ ಮುಗಿದ ಕೂಡಲೇ, ಮೌಲ್ಯಮಾಪನ ಕಾರ್ಯವನ್ನು ಆರಂಭ ಮಾಡಿತ್ತು. ಅದರಂತೆ ಜೂನ್ 18 ಕ್ಕೆ ಫಲಿತಾಂಶವನ್ನು ಫಲಿತಾಂಶವನ್ನು ಪ್ರಕಟಿಸಲು ನಿರ್ಧರಿಸಿದೆ.
ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ www.karresults.nic.in ಗೆ ಭೇಟಿ ನೀಡಿ.
ಜಾಹೀರಾತು