ಜೂ. 21: ದಕ್ಷಿಣ ಕನ್ನಡದ 3 ಕಡೆ ಯೋಗ ದಿನಾಚರಣೆ

ಶೇರ್ ಮಾಡಿ

ನೇಸರ ಜೂ.18: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಸಂಘ-ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಯೋಗ ದಿನಾಚರಣೆ ಜೂ.21ರಂದು ನಡೆಯಲಿದ್ದು, ಈ ಪೈಕಿ ಮೂರು ಕಡೆಗಳಲ್ಲಿ ಜಿಲ್ಲಾ ಮಟ್ಟದ ಯೋಗ ದಿನಾಚರಣೆಯನ್ನು ಆಯೋಜಿಸಲು ನಿರ್ಧರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್‌ ಮಹಾವಿದ್ಯಾಲಯ, ಎನ್‌ಎಸ್‌ಎಸ್‌, ಎನ್‌ಸಿಸಿ ಕೋ ಆರ್ಡಿನೇಟರ್, ವಿವಿಧ ಯೋಗ ಸಂಘಟನೆಗಳ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಪ್ರಧಾನ ಕಾರ್ಯಕ್ರಮ ಮಂಗಳೂರು ಪುರಭವನದಲ್ಲಿ ಜೂ. 21ರಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ. ಜತೆಗೆ ಆಳ್ವಾಸ್‌ ನುಡಿಸಿರಿ ವೇದಿಕೆ ಮೂಡುಬಿದಿರೆ ಹಾಗೂ ಸುಳ್ಯದ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ನಡೆಯಲಿದೆ. ಉಳಿದಂತೆ ಎಲ್ಲ ಆಯುಷ್‌ ಮಹಾವಿದ್ಯಾಲಯ, ಸಂಘ-ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಆಯೋಜಿಸಲಾಗಿದೆ. ಸುಮಾರು 1 ಲಕ್ಷ ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಜಿಲ್ಲೆಯಾದ್ಯಂತ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಸುಮಾರು 50 ಸಾವಿರ ಜನರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ವಿವಿಧ ಯೋಗ ಸಂಘಟನೆಗಳು, ಕಾಲೇಜುಗಳ ಸಹಕಾರದೊಂದಿಗೆ ಆಯೋಜಿಸಲಾಗಿದೆ.

ವೀಕ್ಷಿಸಿ SUBSCRIBERS ಮಾಡಿ🙏🏻

ಜಾಹೀರಾತು

Leave a Reply

error: Content is protected !!