ಪುತ್ತೂರು: ಅರಣ್ಯ ಇಲಾಖೆಯ ಮಿಂಚಿನ ಕಾರ್ಯಾಚರಣೆ; ಕುಖ್ಯಾತ ದಂತಚೋರರ ದಸ್ತಗಿರಿ

ಶೇರ್ ಮಾಡಿ

ನೇಸರ ಜೂ.20: ಮಂಗಳೂರು ವಿಭಾಗದ, ಪುತ್ತೂರು ಉಪವಿಭಾಗದ ಪುತ್ತೂರು ವಲಯದಲ್ಲಿ ಅಂತರರಾಜ್ಯ ಕುಖ್ಯಾತ ದಂತಚೋರರನ್ನು ಸಿನಿಮೀಯ ರೀತಿಯಲ್ಲಿ ದಿನಾಂಕ:18-06-2022 ರಂದು ಮಾಣಿ-ಮೈಸೂರು ಬೈಪಾಸ್ ರಸ್ತೆಯ ರಾಷ್ಟ್ರೀಯ ಹೆದ್ದಾರಿಯ ಮಹಾವೀರ ಆಸ್ಪತ್ರೆಗೆ ತಿರುಗುವ ಜಂಕ್ಷನ್ನಲ್ಲಿ ಅಡ್ಡಗಟ್ಟಿ ದಂತ ಮತ್ತು ವಾಹನವನ್ನು ವಶಪಡಿಸಿಕೊಂಡು ಆರೋಪಿಗಳಾದ ಶಶಿಕುಮಾರ್, ಸತೀಶ್, ವಿಜ್ಞೇಶ್, ವಿನಿತ್, ಸಂಪತ್‌ಕುಮಾರ, ರತೀಶ ಎಂಬ ತಮಿಳುನಾಡು ಮತ್ತು ಕೇರಳ ಮೂಲದ 6 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು.
ಸದರಿ ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯವರಾದ Y K ದಿನೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ V P ಕಾರ್ಯಪ್ಪ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿಗಳಾದ ಕಿರಣ್ ಉಪ ವಲಯ ಅರಣ್ಯಾಧಿಕಾರಿಗಳಾದ ಲೋಕೇಶ್ S N, ಶಿವಾನಂದ್ ಆಚಾರ್ಯ, ಪ್ರಕಾಶ್‌ B T, ಕುಮಾರಸ್ವಾಮಿ, ಮೆಹಬೂಬ್, ಪ್ರಸಾದ್, ಅರಣ್ಯ ರಕ್ಷಕರುಗಳಾದ ನಿಂಗರಾಜ್, ಸುಧೀರ್, ಸತ್ಯನ್‌, ದೀಪಕ, ಉಮೇಶ, ಇಲಾಖೆ ವಾಹನ ಚಾಲಕರಾದ ಜಗದೀಶ್, ರೋಹಿತ್ ಪಾಲ್ಗೊಂಡಿದ್ದರು.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

error: Content is protected !!