ಸ್ವಸ್ಥ ಜೀವನಕ್ಕೆ ಉತ್ತಮ ಆರೋಗ್ಯವು ಅಗತ್ಯ; ಕಣ್ಣಿನ ಮೂಲಕ ಜಗತ್ತನ್ನು ನೋಡುವ ಸೌಭಾಗ್ಯ ನಮ್ಮದು – ಮೊಗರ್ನಾಡು ಜನಾರ್ದನ ಭಟ್

ಶೇರ್ ಮಾಡಿ

ನೇಸರ ಜೂ.20: ಸ್ವಸ್ಥ ಜೀವನಕ್ಕೆ ಉತ್ತಮ ಆರೋಗ್ಯವು ಅಗತ್ಯ. ಕಣ್ಣಿನ ಮೂಲಕ ಜಗತ್ತನ್ನು ನೋಡುವ ಸೌಭಾಗ್ಯ ನಮ್ಮದು. ಆ ನಿಟ್ಟಿನಲ್ಲಿ ಜೇಸಿಐ ಈ ತರದ ಶಿಬಿರವನ್ನು ಗ್ರಾಮೀಣ ಪ್ರದೇಶದಲ್ಲಿ ನಡೆಸುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ. ಸಾರ್ವಜನಿಕರಿಗೆ ಉಪಯುಕ್ತವಾದಂತಹ ಇಂತಹ ಕೆಲಸ ಕಾರ್ಯಗಳ ಪ್ರಯೋಜನ ಎಲ್ಲರಿಗೂ ದೊರಕುವಂತಾಗಲಿ ಎಂದು ಮೊಗರ್ನಾಡು ಶ್ರೀ ಲಕ್ಷ್ಮಿ ನರಸಿಂಹ ದೇವಾಲಯದ ಮೊಕ್ತೇಸರರಾದ ವೇದಮೂರ್ತಿ ಜನಾರ್ದನ ಭಟ್ ಹೇಳಿದರು.
ಅವರು ಜೇಸಿಐ ಜೋಡುಮಾರ್ಗ ನೇತ್ರಾವತಿ, ವಿಜಯಶ್ರೀ ಚಿಕಿತ್ಸಾಲಯ ಮೊಗರ್ನಾಡು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು, ಡಾ.ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ) ಸೆಂಚುರಿ ಗ್ರೂಪ್ ಬೆಂಗಳೂರು ಆಶ್ರಯದಲ್ಲಿ ನಡೆದ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗು ನೇತ್ರದಾನ ನೋಂದಾವಣೆ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಮುಖ್ಯ ಅತಿಥಿಗಳಾದ ಜೇಸಿ ವಲಯ ಅಭಿವೃದ್ದಿ ವಿಭಾಗದ ನಿರ್ದೇಶಕರಾದ ಜೇಸಿ ಪುರುಷೋತ್ತಮ ಶೆಟ್ಟಿಯವರು ಜೇಸಿಐ ಯು ವ್ಯಕ್ತಿತ್ವ ವಿಕಸನ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಸಂಸ್ಥೆಯಾಗಿದೆ ಎಂದರು. ಜೇಸಿಐ ಜೋಡುಮಾರ್ಗ ನೇತ್ರಾವತಿಯ ಅಧ್ಯಕ್ಷರಾದ ಹರಿಪ್ರಸಾದ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.
ವಿಜಯಶ್ರೀ ಚಿಕಿತ್ಸಾಲಯದ ಡಾ.ಸುಬ್ರಹ್ಮಣ್ಯ ಭಟ್, ಪ್ರಸಾದ್ ನೇತ್ರಾಲಯದ ಡಾ.ದಿಶಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜೆಸಿಐ ಕಾರ್ಯದರ್ಶಿ ಕಿಶನ್ ಎನ್ ರಾವ್ ಸ್ವಾಗತಿಸಿ, ವಂದಿಸಿದರು. ಶಿಬಿರದಲ್ಲಿ 148 ಮಂದಿಯ ನೇತ್ರ ತಪಾಸಣೆ ನಡೆಸಿ ಅರ್ಹರಿಗೆ ಶಸ್ತ್ರಚಿಕಿತ್ಸೆ ಹಾಗು ರಿಯಾಯತಿ ದರದ ಕನ್ನಡಕ ನೀಡಲಾಗುವುದು. ಇದೇ ಸಂದರ್ಭದಲ್ಲಿ ಝಂಡು ಹಿಮಾಮಿ ಕಂಪನಿ ವತಿಯಿಂದ ಉಚಿತ ಮಧುಮೇಹ ತಪಾಸಣೆ ನಡೆಸಲಾಯಿತು.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

error: Content is protected !!