ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ

ಶೇರ್ ಮಾಡಿ

ನೇಸರ ಜೂ.22: ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಜನಾರ್ದನ. ಕೆ.ಎನ್ ರವರ ನೇತೃತ್ವದಲ್ಲಿ ಎಲ್ಲಾ ಉಪನ್ಯಾಸಕರ ಸಹಕಾರದಲ್ಲಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಸುಕೇಶ ಚಂದ್ರಶೇಖರ ಇವರು ಯೋಗ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಿದೆ. ಪ್ರಾಂಶುಪಾಲರು ಕಾರ್ಯಕ್ರಮವನ್ನು ಉದ್ಘಾಟಿಸಿ ಒತ್ತಡದಿಂದ ಕೂಡಿರುವ ಈಗಿನ ಬದುಕಿನಲ್ಲಿ ಯೋಗವು ಶಾರೀರಿಕ ಮತ್ತು ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧವಾಗಿದೆ ಆದುದರಿಂದ ಇಂದು ಯೋಗ ಕಾರ್ಯಕ್ರಮ ಜಗತ್ತಿನಾದ್ಯಂತ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಉಪನ್ಯಾಸಕರಾದ ಸುಕೇಶ ಚಂದ್ರಶೇಖರ ಪ್ರಾತ್ಯಕ್ಷತೆಯ ಮೂಲಕ ಯೋಗದ ವಿವಿಧ ಆಸನಗಳ ಬಗ್ಗೆ ಕಿರು ಪರಿಚಯ ನೀಡಿ ವಿದ್ಯಾರ್ಥಿಗಳಿಂದ ವಿವಿಧ ಆಸನಗಳನ್ನು ಮಾಡಿಸಿದರು. ಕಾಲೇಜಿನ 400 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

error: Content is protected !!