ನೇಸರ ಜೂ.24: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ಹಾಗೂ ಕಾಲೇಜಿನ ಪಠ್ಯೇತರ ಚಟುವಟಿಕಾ ಘಟಕಗಳಾದ ಎನ್ ಎಸ್ ಎಸ್, ಎನ್ ಸಿ ಸಿ, ಯುವ ರೆಡ್ ಕ್ರಾಸ್, ರೋವರ್ಸ್ – ರೇಂಜರ್ಸ್ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕಾಲೇಜಿನಲ್ಲಿ ಹಮ್ನಿಕೊಳ್ಳಲಾಯಿತು.
ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ.ಪ್ರಮೋದ್ ಪಿ ಎ ಮುಖ್ಯ ಅತಿಥಿಯಾಗಿ ಭಾಗವಹಿಸಿ ಯೋಗದ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕೆ ವಿ ಜಿ ಆಯುರ್ವೇದ ಕಾಲೇಜಿನ ಮಹಂತ್ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು, ನೇಹ ಸಹಕರಿಸಿದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಶ್ರೀಮತಿ ಮಮತಾ ಕೆ ಸ್ವಾಗತಿಸಿ, ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಮಧುರಾ ಎಂ ಆರ್ ವಂದಿಸಿದರು. ಕಾಲೇಜಿನ ಬೋಧಕ- ಬೋಧಕೇತರ ವೃಂದದವರು, ಎಲ್ಲಾ ಘಟಕಗಳ ಸ್ವಯಂ ಸೇವಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.